

ಕೇಂದ್ರ ಸರ್ಕಾರದ ನೂತನ ಕಾನೂನುಗಳನ್ನು ವಿರೋಧಿಸಿ ಡಿಸೆಂಬರ್ 8ಕ್ಕೆ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ಕಾಂಗ್ರೆಸ್ ಮತ್ತು ತೆಲಂಗಾಣ ರಾಷ್ಟ್ರೀಯ ಸಮಿತಿ ಬೆಂಬಲ ವ್ಯಕ್ತಪಡಿಸಿವೆ.

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕಾನೂನುಗಳನ್ನು ವಿರೋಧಿಸಿ ಡಿಸೆಂಬರ್ 8ಕ್ಕೆ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ಕಾಂಗ್ರೆಸ್ ಮತ್ತು ತೆಲಂಗಾಣ ರಾಷ್ಟ್ರೀಯ ಸಮಿತಿ ಬೆಂಬಲ ವ್ಯಕ್ತಪಡಿಸಿವೆ.
ಡಿಸೆಂಬರ್ 8 ರಂದು ನಡೆಯುವ ಪ್ರತಿಭಟನೆ ಸಂದರ್ಭದಲ್ಲಿ ಪಕ್ಷದ ಕಚೇರಿಗಳಲ್ಲಿ ಪ್ರತಿಭಟನೆ ನಡೆಸಲಾಗುವುದು, ಇದು ರೈತರಿಗೆ ರಾಹುಲ್ ಗಾಂಧಿ ಅವರ ಬೆಂಬಲವನ್ನು ಬಲಪಡಿಸುವ ಒಂದು ಹೆಜ್ಜೆಯಾಗಿದೆ. ಪ್ರತಿಭಟನೆ ಯಶಸ್ವಿಯಾಗಲಿದೆ ಎಂದು ಖಾತ್ರಿಪಡಿಸುವುದಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರ್ ತಿಳಿಸಿದ್ದಾರೆ.
ಈ ಮಧ್ಯೆ ತೆಲಂಗಾಣ ರಾಷ್ಟ್ರೀಯ ಸಮಿತಿ ಕೂಡಾ ಭಾರತ್ ಬಂದ್ ಗೆ ಬೆಂಬಲವನ್ನು ವ್ಯಕ್ತಪಡಿಸಿದೆ. ಬೆಂಬಲ ಯಶಸ್ವಿಯಾಗುವ ನಿಟ್ಟಿನಲ್ಲಿ ಪಕ್ಷ ಸಕ್ರಿಯವಾಗಿ ಪಾಲ್ಗೊಳ್ಳಲಿದೆ ಎಂದು ಟಿಆರ್ ಎಸ್ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹೇಳಿದ್ದಾರೆ.
ಕಾನೂನು ರೀತಿಯ ರೈತರ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿ ಕಾರ್ಯಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ. (kpc)
