ಗ್ರಾಮಪಂಚಾಯತ್ ಚುನಾವಣೆಗೆ ಜಿಲ್ಲೆಯಲ್ಲಿ ಎರಡು ಹಂತದ ಮತದಾನ : ಡಿಸಿಕಾರವಾರ

ಡಿ.7 (ಕರ್ನಾಟಕ ವಾರ್ತೆ) : ಜಿಲ್ಲೆಯಲ್ಲಿ ಡಿ.22 ಮತ್ತು 27 ರಂದು ಎರಡು ಹಂತಗಳಲ್ಲಿ ಗ್ರಾಮಪಂಚಾಯತ್ ಚುನಾವಣೆ ನಡೆಸಲಾಗುತ್ತಿದ್ದು, ಮೊದಲನೆಯ ಹಂತದ ಚುನಾವಣೆಗೆ ಡಿ.7 ರಿಂದ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ. ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಂಭಾಗಣದಲ್ಲಿ ಸೊಮವಾರ ಗ್ರಾಮಪಂಚಾಯತ್ ಚುನಾವಣೆ ಕುರಿತು ಪತ್ರಿಕಾಗೋ ಷ್ಠಿ ನಡೆಸಿ ಮಾತನಾಡಿ ಮೊದಲನೆಯ ಹಂತದ ಚುನಾವಣೆಗೆ ಜಿಲ್ಲೆಯ 5 ತಾಲೂಕುಗಳ 101 ಗ್ರಾಮಪಂಚಾಯತಗಳಲ್ಲಿ ಚುನಾವಣೆ ನಡೆಯಲಿದ್ದು, ಒಟ್ಟು 698 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಪ್ರತಿ 10-15 ಮತಗಟ್ಟೆಗಳಿಗೆ ಸೆಕ್ಟರ್ ಆಫೀಸರ್ ಮತ್ತು ಸೆಕ್ಟರ್ ಹೆಲ್ತ್ ರೆಗ್ಯುಲೆಟರ್, ಪ್ರತಿ ತಾಲೂಕಿಗೆ ಫ್ಲಾಯಿಂಗ್ ಸ್ಕ್ಯಾಡ್, ಪ್ರತಿ ತಾಲೂಕಿನಲ್ಲಿ ತಹಶೀಲ್ದಾರ್ ನೆತ್ರತ್ವದಲ್ಲಿ ಮಾದರಿ ನಿತಿಸಂಹಿತೆಯ ತಂಡವನ್ನು ರಚಿಸಲಾಗಿದ್ದು, ಈ ತಂಡದಲ್ಲಿ ತಾಲೂಕ್ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ, ಪೋಲಿಸ್ ವೃತ್ತ ನೀರಿಕ್ಷಕ ,ಪೋಲಿಸ್ ಸಬ್ ಇನ್ಸ್ಪೆಕ್ಟರ್ , ಕಂದಾಯ ನೀರಿಕ್ಷಕ ಕಾರ್ಯ ನಿರ್ವಹಿಸಲಿದ್ದಾರೆ ಎಂದರು.

ಮೊದಲನೆ ಹಂತದ ಚುನಾವಣೆಗಾಗಿ ಡಿ.7 ಸೋಮುವಾರದಂದು ಚುನಾವಣೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಡಿ.11 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಡಿ.12 ರಂದು ನಾಮಪತ್ರಗಳನ್ನು ಪರಿಶೀಲಿಸುವ ದಿನವಾಗಿದ್ದರೆ ಡಿ.14 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ.

ಡಿ.22 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಘಂಟೆಯವರಗೆ ಮತದಾನ ನಡೆಯಲಿದ್ದು ಡಿ. 30 ರಂದು ಆಯಾ ತಾಲೂಕ ಕೇಂದ್ರಗಳಲ್ಲಿ ಮತ ಎಣಿಕೆ ನಡೆಸಲಾಗುವುದೆಂದರು.ಮೊದಲ ಹಂತದ ಚುನಾವಣೆಯಲ್ಲಿ ಕಾರವಾರ, ಅಂಕೋಲಾ ,ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ಗ್ರಾಮಪಂಚಾಯತಗಳಲ್ಲಿ ಚುನಾವಣೆ ನಡೆಸಲಾಗುತ್ತಿದೆ ಹೊನ್ನಾವರ ತಾಲೂಕಿನ ಗ್ರಾಮಪಂಚಾಯತಗಳ ಪೈಕಿ ಹೊನ್ನಾವರ ತಾಲೂಕಿನ (ಗುಳದಕೇರಿ)ಮಂಕಿ-ಎ (ಹಳೇಮಠ), ಮಂಕಿ ಬಿ (ಅನಂತವಾಡಿ) ಮತ್ತು ಮಂಕಿ-ಸಿ(ಚಿತ್ತಾರ) ಗ್ರಾಮ ಪಂಚಾಯತಗಳನ್ನು ಹೊರತುಪಡಿಸಿ ಚುನಾವಣೆ ನಡೆಸಲಾಗುವುದು. ಮಂಕಿ ಗ್ರಾಮಪಂಚಾಯತವನ್ನು ಪಟ್ಟಣ ಪಂಚಾಯತವನ್ನಾಗಿ ಮೇಲ್ದರ್ಜೆಗೆ ಏರಿಸಲು ಸರಕಾರವು ಅಧಿಸೂಚನೆ ಹೊರಡಿಸುವುದರಿಂದ ಚುನಾವಣೆಯನ್ನು ಆಯೋಗವು ಕೈ ಬಿಟ್ಟಿರುತ್ತದೆ ಎಂದು ತಿಳಿಸಿದರು.

ಡಿ.31 ವರೆಗೆ ನೀತಿಸಂಹಿತೆ :- ಚುನಾವಣೆ ನಡೆಯುವ ಗ್ರಾಮಪಂಚಾಯತಿಯ ವ್ಯಾಪ್ತಿಯಲ್ಲಿ ಡಿ.31 ರ ವರೆಗೆ ನೀತಿಸಂಹಿತೆ ಜಾರಿಯಲ್ಲಿರುವುದು ಪಟ್ಟಣ ಪಂಚಾಯಿತಿ ಪುರಸಭೆ , ನಗರಸಭೆ ನಗರ ಪಾಲಿಕೆಯ ಪ್ರದೇಶಗಳಿಗೆ ಈ ನೀತಿಸಂಹಿತೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಪೊಲೀಸ್ ಬಿಗಿ ಬಂದೋಬಸ್ತ್ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಶಿವಪ್ರಕಾಶ ದೇವರಾಜು ಅವರು ಮಾತನಾಡಿ ಗ್ರಾಮ ಪಂಚಾಯತ್ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು , ಮೊದಲ ಹಂತದ ಚುನಾವಣೆಯಲ್ಲಿ 53 ಅತೀ ಸೂಕ್ಷ್ಮ 164 ಸೂಕ್ಷ್ಮ ಮತ್ತು 513 ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಚುನವಣೆ ಸಂದರ್ಭದಲ್ಲಿ ಗಲಭೆ ಅಥವಾ ಚುನಾವಣೆ ಕರ್ತವ್ಯಗಳಿಗೆ ಅಡ್ಡಿಪಡಿಸಬಹುದಾದ ಸಮಾಜಘಾತಕ ವ್ಯಕ್ತಿಗಳನ್ನು ಈಗಾಗಲೇ ಪಟ್ಟಿಮಾಡಿ ಅವರ ಮೇಲೆ ಸೂಕ್ತ ನಿಗಾವಹಿಸಲಾಗಿದ್ದು ಮುಂಜಾಗ್ರತೆಯ ಕ್ರಮವಾಗಿ ಭದ್ರತಾ ಕಾಯಿದೆಯ ಅಡಿ ಪ್ರಕರಣ ದಾಖಲಿಸಲಾಗುತ್ತಿದೆ ಎಂದರು.

ಪ್ರತಿ ಮತಗಟ್ಟೆ ಭದ್ರತೆಗಾಗಿ ಪೋಲಿಸ್ ಸಿಬ್ಬಂದಿಗಳನ್ನು ಅವಶ್ಯಕತೆ ಅನುಗುಣವಾಗಿ ನೇಮಿಸಲಾಗುವುದು. ಡಿ.ಎಸ್.ಪಿ 5, ಸಿ.ಪಿ.ಐ/ಪಿಐ-17, ಪಿಎಸ್‍ಐ-70, ಎಎಸ್‍ಐ-160, ಎಚ್‍ಸಿ/ಪಿಸಿ-1160 ಪೋಲಿಸ್ ಅಧಿಕಾರಿ/ಸಿಬ್ಬಂದಿ, 15 ಡಿಎಆರ್ ತುಕಡಿಗಳು ಮತ್ತು 6 ಕೆಎಸ್‍ಆರ್‍ಪಿ ತುಕಡಿಗಳನ್ನು ಹಾಗೂ ಸುಮಾರು 400 ಗೃಹರಕ್ಷಕ ದಳದ ಸಿಬ್ಬಂದಿಯನ್ನು ಚುನವಣಾ ಕರ್ತವ್ಯಕ್ಕೆ ನಿಯೋಜಿಸಲಾಗುವುದು. ಜಿಲ್ಲೆಯಾದ್ಯಂತ 54 ಚೆಕ್ ಪೋಸ್ಟಗಳನ್ನು ತೆರೆಯಲಾಗಿದ್ದು ಚುನಾವಣಾ ಅಕ್ರಮಗಳ ಬಗ್ಗೆ ನೀತಿಸಂಹಿಯಂತೆ ನಿಗಾವಹಿಸಲಿ ದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ. ಪ್ರಿಯಾಂಗಾ ಹಾಗೂ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ.ಕೆ. ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *