

ಅರಣ್ಯ ಅತಿಕ್ರಮಣ ಪ್ರದೇಶದಲ್ಲಿ ಮನೆ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ಧಾಪುರ ಅರೆಂದೂರಿನ ಮೊಸಿನ್ ಸೈಯದ್ ಸಾಬ್ ಎನ್ನುವವರ ಮೇಲೆ ಅರಣ್ಯ ಅಧಿಕಾರಿಗಳು ಹಲ್ಲೆ ನಡೆಸಿರುವ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಕಳೆದ ವಾರ ಮೋಸಿನ್ ಮೇಲೆ ಸಿದ್ಧಾಪುರ ವಲಯದ ಅರಣ್ಯ ಅಧಿಕಾರಿ ಇಬ್ಬರು ಗಾರ್ಡ್ಗಳೊಂದಿಗೆ ದೈಹಿಕ ಹಲ್ಲೆ ನಡೆಸಿ ಕೊಲೆ ಬೆದರಿಕೆ ಒಡ್ಡಿದ್ದರು. ಈ ಬಗ್ಗೆ ಇಂದು ಪೊಲೀಸ್ ದೂರು ದಾಖಲಾಗಿದೆ.
ಈ ಪ್ರಕರಣದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರೆಂದೂರಿನ ನಾಗರಿಕರು ಮತ್ತು ಸಾಮಾಜಿಕ ಕಾರ್ಯಕರ್ತರು ಅರಣ್ಯ ಅಧಿಕಾರಿಗಳ ವರ್ತನೆಯನ್ನು ಖಂಡಿಸಿದರು. ಒಂದುವಾರದ ಸಮಯ ಮಿತಿಯಲ್ಲಿ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಅಧಿಕಾರಿಗಳನ್ನು ಅಮಾನತ್ ಮಾಡದಿದ್ದರೆ ಅರಣ್ಯ ಇಲಾಖೆಯ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಎಚ್ಚರಿಸಿದರು.
ಶಿರಸಿ ಶಾಸಕರು, ಉತ್ತರ ಕನ್ನಡ ಜಿಲ್ಲೆಯ ಸಂಸದರು, ಸಚಿವರು ಅಧಿಕಾರಿಗಳನ್ನು ನಿಯಂತ್ರಿಸಿ ಜನಸಾಮಾನ್ಯರಿಗೆ ಕಿರುಕುಳ ತಪ್ಪಿಸದಿದ್ದರೆ ಪರಿಣಾಮ ಕೆಟ್ಟದಾಗಲಿದೆ – ವೀರಭದ್ರ ನಾಯ್ಕ, ರೈತಸಂಘದ ಅಧ್ಯಕ್ಷ
ತಾಲೂಕಿನಲ್ಲಿ ಅಧಿಕಾರಿಗಳ ಅಟ್ಟಹಾಸ ಮಿತಿಮೀರಿದೆ. ಕಂದಾಯ, ಅರಣ್ಯ ಇಲಾಖೆಗಳ ಅಧಿಕಾರಿಗಳು ಜನಪ್ರತಿನಿಧಿಗಳ ಸಹಕಾರದಿಂದಲೇ ಜನರನ್ನು ಪೀಡಿಸುತಿದ್ದಾರೆ. ತಾಲೂಕಿನ ಜನ ಕಾನೂನು ಕೈ ತೆಗೆದುಕೊಳ್ಳುವ ಮುನ್ನ ವ್ಯವಸ್ಥೆ ಸುಧಾರಿಸಬೇಕಿದೆ. – ಶಿವಾನಂದ ಎಚ್.ಕೆ. ದಲಿತಮುಖಂಡ

