ನಿರಂಕುಶಾಧಿಕಾರಿ ಶೈಲಿಯ ಮೋದಿ ಆಡಳಿತ, ಪಕ್ಷದ ನಾಯಕತ್ವ ನಿಭಾಯಿಸಲಾಗದ ಸೋನಿಯಾ’: ಪ್ರಣಬ್ ಮುಖರ್ಜಿ ಆತ್ಮಚರಿತ್ರೆಯಲ್ಲಿ ಏನಿದೆ?

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರದ್ದು ಒಂದು ರೀತಿಯಲ್ಲಿ ನಿರಂಕುಶಾಧಿಕಾರಿ ಶೈಲಿಯ ಕಾರ್ಯವೈಖರಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರಿಗೆ ಸಮ್ಮಿಶ್ರ ಸರ್ಕಾರ ಉಳಿಸುವ ಕೆಲಸದಲ್ಲಿ ನಿರತರಾಗಿದ್ದರಿಂದ ಅದು ಸರ್ಕಾರದ ಆಡಳಿತವನ್ನು ಹಾನಿಗೊಳಿಸಿತು.

Ex president Late Pranab Mukherjee

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರದ್ದು ಒಂದು ರೀತಿಯಲ್ಲಿ ನಿರಂಕುಶಾಧಿಕಾರಿ ಶೈಲಿಯ ಕಾರ್ಯವೈಖರಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಸಮ್ಮಿಶ್ರ ಸರ್ಕಾರ ಉಳಿಸುವ ಕೆಲಸದಲ್ಲಿ ನಿರತರಾಗಿದ್ದರಿಂದ ಅದು ಸರ್ಕಾರದ ಆಡಳಿತವನ್ನು ಹಾನಿಗೊಳಿಸಿತು.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪಕ್ಷದ ವ್ಯವಹಾರಗಳನ್ನು ನಿಭಾಯಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಮಾಜಿ ರಾಷ್ಟ್ರಪತಿ ದಿವಂಗತ ಪ್ರಣಬ್ ಮುಖರ್ಜಿ ತಮ್ಮ ಆತ್ಮ ಚರಿತ್ರೆಯ ನಾಲ್ಕನೇ ಸಂಪುಟದಲ್ಲಿ ಬರೆದುಕೊಂಡಿದ್ದಾರಂತೆ. ಇದು ಮುಂದಿನ ವರ್ಷ ಜನವರಿಯಲ್ಲಿ ಬಿಡುಗಡೆಯಾಗಲಿದೆ.

ಪ್ರಣಬ್ ಮುಖರ್ಜಿಯವರು ತೀರಿಹೋಗಿದ್ದು ಇದೇ ವರ್ಷ ಆಗಸ್ಟ್ 31ರಂದು. ಅದಕ್ಕೂ ಮುನ್ನ ತಮ್ಮ ನೆನಪುಗಳನ್ನು ಆತ್ಮಚರಿತ್ರೆಯಲ್ಲಿ ಬರೆಯುವ ಕೆಲಸ ಮುಗಿಸಿದ್ದರು. ತಿಂಗಳುಗಳ ಕಾಲ ದೆಹಲಿಯ ಮಿಲಿಟರಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಾ ಅಸುನೀಗಿದರು. 

ನಾನು ರಾಷ್ಟ್ರಪತಿಯಾದ ನಂತರ ಕಾಂಗ್ರೆಸ್ ನಲ್ಲಿ ಪಕ್ಷದ ನಾಯಕತ್ವ ರಾಜಕೀಯದ ಮೇಲೆ ಗಮನ ಕೇಂದ್ರೀಕರಿಸುವ ಶಕ್ತಿಯನ್ನು ಕಳೆದುಕೊಂಡಿತು. ಸಮ್ಮಿಶ್ರ ಸರ್ಕಾರವನ್ನು ಉಳಿಸುವುದರಲ್ಲಿಯೇ ಡಾ ಮನಮೋಹನ್ ಸಿಂಗ್ ನಿರತರಾಗಿದ್ದರು, ಇದು ಆಡಳಿತದ ಮೇಲೆ ತೀವ್ರ ಪರಿಣಾಮ ಬೀರಿತು ಎಂದು ಪುಸ್ತಕದಲ್ಲಿ ಬರೆದಿದ್ದಾರೆ ಪ್ರಣಬ್ ಮುಖರ್ಜಿ.

ನರೇಂದ್ರ ಮೋದಿಯವರು ಪ್ರಧಾನಿಯಾದ ತಮ್ಮ ಮೊದಲ 5 ವರ್ಷಗಳ ಅವಧಿಯಲ್ಲಿ ನಿರಂಕುಶಾಧಿಕಾರಿಯಂತೆ ಆಡಳಿತ ನಡೆಸಿದ್ದು ಕಂಡುಬರುತ್ತದೆ. ಇದರಿಂದ ನ್ಯಾಯಾಂಗ ಮತ್ತು ಶಾಸಕಾಂಗಗಳ ಮಧ್ಯೆ ಸಂಬಂಧ ಕಹಿಯಾದಂತೆ ಕಂಡುಬಂತು. ನರೇಂದ್ರ ಮೋದಿಯವರ ಎರಡನೇ ಆಡಳಿತ ಅವಧಿಯಲ್ಲಿ ನ್ಯಾಯಾಂಗ ಮತ್ತು ಶಾಸಕಾಂಗಗಳ ಮಧ್ಯೆ ಸಂಬಂಧ ಸುಧಾರಣೆಯಾಗುತ್ತದೆಯೇ, ಇಬ್ಬರ ಮಧ್ಯೆ ಅರ್ಥೈಸಿಕೊಳ್ಳುವಿಕೆ ಹೆಚ್ಚಾಗುತ್ತದೆಯೇ ಎಂದು ಕಾಲವೇ ನಿರ್ಧರಿಸಲಿದೆ ಎಂದು ಪ್ರಣಬ್ ಮುಖರ್ಜಿ ತಮ್ಮ ಆತ್ಮಚರಿತ್ರೆಯಲ್ಲಿ ಬರೆದಿದ್ದಾರೆ.

ಇನ್ನು ಸೋನಿಯಾ ಗಾಂಧಿಯವರ ನಾಯಕತ್ವದ ಬಗ್ಗೆ ಕಟುವಾಗಿ ಟೀಕಿಸಿರುವ ಪ್ರಣಬ್ ಮುಖರ್ಜಿ, ಸೋನಿಯಾ ಗಾಂಧಿಯವರಿಗೆ ಪಕ್ಷದ ವ್ಯವಹಾರಗಳನ್ನು, ನಾಯಕತ್ವವನ್ನು ನಿಭಾಯಿಸಲು ಸಾಧ್ಯವಾಗುತ್ತಿರಲಿಲ್ಲ, ಸದನದಲ್ಲಿ ಡಾ ಮನಮೋಹನ್ ಸಿಂಗ್ ಅವರ ದೀರ್ಘ ಸಮಯದ ಗೈರು ಬೇರೆ ಸಂಸದರೊಂದಿಗೆ ವೈಯಕ್ತಿಕವಾಗಿ ಸಂಪರ್ಕ ಹೊಂದಲು ಸಾಧ್ಯವಾಗುತ್ತಿರಲಿಲ್ಲ, ಇದರಿಂದ ಕಾಂಗ್ರೆಸ್ ಪಕ್ಷ, ಸರ್ಕಾರದ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *