

ರಾಜ್ಯದಲ್ಲಿ 2021ರ ಜನವರಿ 1ನೇ ದಿನಾಂಕದಿಂದ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಹಾಗೂ 6 ರಿಂದ 9ನೇ ತರಗತಿವರೆಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.


ಬೆಂಗಳೂರು: ರಾಜ್ಯದಲ್ಲಿ 2021ರ ಜನವರಿ 1ನೇ ದಿನಾಂಕದಿಂದ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಹಾಗೂ 6 ರಿಂದ 9ನೇ ತರಗತಿವರೆಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ರಾಜ್ಯದಲ್ಲಿ ಶಾಲೆ-ಕಾಲೇಜುಗಳನ್ನು ಪ್ರಾರಂಭಿಸುವ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಈ ತರಗತಿಗಳನ್ನು ಪ್ರಾರಂಭಿಸಿ, 15 ದಿನಗಳ ಕಾಲ ಪರಿಸ್ಥಿತಿಯನ್ನು ಅವಲೋಕಿಸಿ ನಂತರ ಇತರ ತರಗತಿಗಳನ್ನು ಪ್ರಾರಂಭಿಸುವ ಕುರಿತು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು.
ಶಾಲೆಗಳನ್ನು ಮರುಪ್ರಾರಂಭಿಸುವ ಸಂದರ್ಭದಲ್ಲಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ರಾಜ್ಯ ಕೋವಿಡ್ 19ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಮಕ್ಕ ಳು ಶಾಲೆಗೆ ಮತ್ತು ವಿದ್ಯಾಗಮ ಕಾರ್ಯಕ್ರಮಕ್ಕೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ಕಡ್ಡಾಯ. ಅನು ಮತಿ ಪತ್ರದಲ್ಲಿ ವಿದ್ಯಾರ್ಥಿಗೆ ಕೋವಿಡ್ 19 ಸೋಂಕಿನ ಲಕ್ಷಣಗಳಿಲ್ಲವೆಂದು ದೃಢೀಕರಿಸಬೇಕು. ವಸತಿ ಶಾಲೆಗಳ ಲ್ಲಿ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳು, ಪ್ರವೇಶ ಪಡೆಯುವ 72 ಗಂಟೆಗಳ ಅಂತರದಲ್ಲಿ ಕೋವಿಡ್-19 ಪರೀಕ್ಷೆ ಮಾಡಿಸಿ, ನೆಗೇಟಿವ್ ವರದಿಯನ್ನು ಸಲ್ಲಿಸಬೇಕು. ಶಾಲೆ-ಕಾಲೇಜಿಗೆ ಹಾಜರಾತಿ ಕಡ್ಡಾಯ ವಲ್ಲ. ವಿದ್ಯಾರ್ಥಿಗಳು ಮನೆಯಲ್ಲಿಯೇ ಇದ್ದು ಆನ್ ಲೈನ್, ಯುಟ್ಯೂಬ್ ಚಾನೆಲ್ ಮತ್ತು ಇತರ ಮೂಲಗಳಿಂದಲೂ ಅಭ್ಯಾಸ ಮಾಡಬಹುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಶಾಲೆ-ಕಾಲೇಜುಗಳಲ್ಲಿ ತರಗತಿ ಕೊಠಡಿಗಳನ್ನು ಡಿಸ್-ಇನ್ಫೆಕ್ಷನ್ ಮಾಡಿಸುವ ಕುರಿತು ಮುನ್ನೆಚ್ಚರಿಕೆ ವಹಿಸಬೇಕು. ವಿದ್ಯಾರ್ಥಿಗಳಿಗೆ ಅರ್ಧ ದಿನ ಮಾತ್ರ ತರಗತಿ ನಡೆಯಲಿದೆ. ಒಂದು ಕೊಠಡಿಯಲ್ಲಿ ಗರಿಷ್ಠ 15 ವಿದ್ಯಾರ್ಥಿಗಳಿಗೆ ತರಗತಿ ನಡೆಸಬೇಕು. ಬಿಸಿಯೂಟ ವಿತರಣೆ ಇರುವುದಿಲ್ಲ. ಬದಲಿಗೆ ಪ್ರಸ್ತುತ ಜಾರಿಯಲ್ಲಿರುವಂತೆ ಆಹಾರ ಸಾಮಗ್ರಿಯನ್ನು ಒದಗಿಸಲಾಗುವುದು. ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕುರಿತು ಶಿಕ್ಷಣ ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಯಿತು. ವಿದ್ಯಾಗಮ ಕಾರ್ಯಕ್ರಮದಡಿ ವಿದ್ಯಾರ್ಥಿಗಳು ವಾರಕ್ಕೆ ಎರಡು ಬಾರಿ ಶಾಲೆಗೆ ಹಾಜರಾಗಬೇಕಾಗುವುದು. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
