

ಕೋವಿಡ್-19: ದೇಶದಲ್ಲಿಂದು 25,153 ಹೊಸ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 1 ಕೋಟಿ-ದೇಶದಲ್ಲಿಂದು 25,153 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ನವದೆಹಲಿ: ದೇಶದಲ್ಲಿಂದು 25,153 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
ಇನ್ನು ಇದೂವರೆಗೆ ದೇಶದಲ್ಲಿ ಸೋಂಂಕಿನಿಂದ ಗುಣ ಮುಖರಾದವರ ಸಂಖ್ಯೆ 95,50,712ಕ್ಕೆ ಏರಿಕೆಯಾಗಿದ್ದು, ಸಾವನ್ನಪ್ಪಿದವರ ಪ್ರಮಾಣ 1,45,136ಕ್ಕೆ ತಲುಪಿದೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,08,751ಕ್ಕೆ ಇಳಿಕೆಯಾಗಿದೆ.
ಅತೀ ಹೆಚ್ಚು ಸೋಂಕಿತರನ್ನು ಹೊಂದಿರುವ ದೇಶಗಳ ಪೈಕಿ ಭಾರತ ವಿಶ್ವದಲ್ಲೇ 2ನೇ ಸ್ಥಾನದಲ್ಲಿದ್ದರೆ, ಅತೀ ಹೆಚ್ಚು ಸಾವು ದಾಖಲಾದ ದೇಶಗಳಲ್ಲಿ ವಿಶ್ವದಲ್ಲಿ 3ನೇ ಸ್ಥಾನದಲ್ಲಿದೆ.
ರಾಜ್ಯದಲ್ಲಿ ಹೆಚ್ಚಿದ ಕೊರೋನಾ ಸಾವಿನ ಸಂಖ್ಯೆ: ಇಂದು 1,152 ಮಂದಿಗೆ ಪಾಸಿಟಿವ್, 15 ಬಲಿ, 12 ಸಾವಿರಕ್ಕೇರಿದ ಸಾವು!
ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಶುಕ್ರವಾರ 1,152 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 9,08,275ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಶುಕ್ರವಾರ 1,152 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 9,08,275ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 15 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 12,004 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಇಂದು 2,174 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,81,882ಕ್ಕೆ ಏರಿಕೆಯಾಗಿದೆ. ಇನ್ನು 14,370 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 223 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 586 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,82,209ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 10 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
(kpc)
