curfew cancelled!- ಇಂದಿನಿಂದ ನಿಶೇಧಾಜ್ಞೆ ಇಲ್ಲ!

ವ್ಯಾಪಕ ಟೀಕೆ ಬೆನ್ನಲ್ಲೇ ನೈಟ್ ಕರ್ಫ್ಯೂ ಆದೇಶ ಹಿಂಪಡೆದ ರಾಜ್ಯ ಸರ್ಕಾರ!ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಬೇಕಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿಗೆ ಮುನ್ನವೇ ಹಿಂಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಮಾರಣಹೋಮ: ಬಂದೂಕುಧಾರಿಗಳಿಂದ ಮನಬಂದಂತೆ ಗುಂಡು ಹಾರಿಸಿ 100ಕ್ಕೂ ಹೆಚ್ಚು ಜನರ ಭೀಕರ ಹತ್ಯೆ!

ಇಥಿಯೋಪಿಯಾದ ಪಶ್ಚಿಮ ಬೆನಿಶಾಂಗುಲ್-ಗುಮುಜ್ ಪ್ರಾದೇಶಿಕ ರಾಜ್ಯದಲ್ಲಿ ಅಪರಿಚಿತ ಬಂದೂಕುಧಾರಿಗಳು ಮನ ಬಂದಂತೆ ಗುಂಡಿನ ದಾಳಿ ನಡೆಸಿ 100ಕ್ಕೂ ಹೆಚ್ಚು ನಾಗರಿಕರನ್ನು ಭೀಕರವಾಗಿ ಕೊಂದಿದ್ದಾರೆ. 

Villagers

ಅಡಿಸ್ ಅಬಾಬಾ: ಇಥಿಯೋಪಿಯಾದ ಪಶ್ಚಿಮ ಬೆನಿಶಾಂಗುಲ್-ಗುಮುಜ್ ಪ್ರಾದೇಶಿಕ ರಾಜ್ಯದಲ್ಲಿ ಅಪರಿಚಿತ ಬಂದೂಕುಧಾರಿಗಳು ಮನ ಬಂದಂತೆ ಗುಂಡಿನ ದಾಳಿ ನಡೆಸಿ 100ಕ್ಕೂ ಹೆಚ್ಚು ನಾಗರಿಕರನ್ನು ಭೀಕರವಾಗಿ ಕೊಂದಿದ್ದಾರೆ. 

ಈ ಘಟನೆ ಬುಧವಾರ ಮುಂಜಾನೆ ಬೆಕುಜಿ ಕೆಬೆಲ್ಲೆ, ಬುಲೆನ್ ವೆರೆಡಾ ಮತ್ತು ಮೆಟೆಕೆಲ್ ವಲಯದಲ್ಲಿ ಸಂಭವಿಸಿದೆ. ದಾಳಿಕೋರರು ನಿದ್ರೆಯಲ್ಲಿದ್ದ ನಿವಾಸಿಗಳ ಮೇಲೆ ಮನ ಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

“ಜನರನ್ನು ಕೊಂದು ಅವರ ಮನೆಗಳನ್ನು ಸಹ ಸುಟ್ಟು ಹಾಕಲಾಗಿದೆ ಎಂದು ನ್ಯಾಷನಲ್ ಆಡಿಸ್ ಸ್ಟ್ಯಾಂಡರ್ಡ್ ಸುದ್ದಿ ನಿಯತಕಾಲಿಕವು ಪ್ರತ್ಯಕ್ಷದರ್ಶಿಯೊಬ್ಬರನ್ನು ಉಲ್ಲೇಖಿಸಿ ವರದಿ ಮಾಡಿದೆ. ಭದ್ರತಾ ಪಡೆಗಳ ಮೇಲೂ ದಾಳಿ ನಡೆಸಲಾಗಿದೆ ಎನ್ನಲಾಗಿದೆ ಆದರೆ ದಾಳಿ ಕೋರರು ಬಂದು ಹೋದ ಮೇಲೆ ಭದ್ರತಾಪಡೆಗಳು ಸ್ಥಳಕ್ಕೆ ಆಗಮಿಸಿದ್ದವು. 

ಇನ್ನು ಭೀಕರ ನರಹತ್ಯೆಗೈದಿದ್ದ ಶಸ್ತ್ರಸರ್ಜಿತ 42 ಮಂದಿಯನ್ನು ಇಥಿಯೋಪಿಯಾ ಸೇನೆ ಹುಡುಕಿ ಹುಡುಕಿ ಕೊಂದು ಹಾಕಿದೆ.

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಬೇಕಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿಗೆ ಮುನ್ನವೇ ಹಿಂಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ನೈಟ್ ಕರ್ಫ್ಯೂ ಜಾರಿ ಆದೇಶ ಹಿಂಪಡೆದಿರುವ ಬಗ್ಗೆ ಮುಖ್ಯಮಂತ್ರಿ ಬಿ..ಎಸ್. ಯಡಿಯೂರಪ್ಪ ಮಾದ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಸಿಎಂ ಮಾದ್ಯಮ ಪ್ರಕಟನೆ ಸಂಪೂರ್ಣ ವಿವರ ಹೀಗಿದೆ-

“ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕರ್ಫ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು.

“ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ರಾತ್ರಿ ಕರ್ಫ್ಯೂವಿನ ಅಗತ್ಯವಿಲ್ಲವೆಂಬಂತಹ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕಫ್ರ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ.

“ಸಾರ್ವಜನಿಕರು ಸ್ವಯಂ ನಿರ್ಬಂ ಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಲು ಕೋರಿದೆ.”

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *