

ರಾಷ್ಟ್ರ ಮಟ್ಟದಲ್ಲಿ ಜನತಾ ಪರಿವಾರ ಒಗ್ಗೂಡಿಸಲು ಎಲ್ಲ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.





ಬೆಂಗಳೂರು: ರಾಷ್ಟ್ರ ಮಟ್ಟದಲ್ಲಿ ಜನತಾ ಪರಿವಾರ ಒಗ್ಗೂಡಿಸಲು ಎಲ್ಲ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಏನೋ ಆಗಬೇಕೆಂದು ಜೆಡಿಎಸ್‌ಗೆ ಹೋಗುತ್ತಿಲ್ಲ. ರಾಜ್ಯಕ್ಕೆ, ದೇಶಕ್ಕೆ ಏನಾದರೂ ಆಗಬೇಕು ಎಂದು ಹೋಗುತ್ತಿದ್ದೇನೆ. ಲಕ್ಷಾಂತರ ರೈತರು ಚಳಿಗಾಳಿ ಲೆಕ್ಕಿಸದೇ ಹೋರಾಟ ಮಾಡುತ್ತಿದ್ದಾರೆ. ಮುಂದೆ ರಾಜ್ಯದಲ್ಲೂ ಅದೆ ಪರಿಸ್ಥಿತಿ ಬರುತ್ತದೆ. ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದರು.


ಹಾಗೆಯೇ ಪ್ರಭಾಕರ್ ಕೋರೆ, ಉಮೇಶ್ ಕತ್ತಿ ಭೇಟಿಯಾಗಿದ್ದಾರೆ. ನಮ್ಮ ಟ್ರೈನ್ ಇನ್ನು ಶುರು ಮಾಡಿಲ್ಲ. ಶುರುವಾದ ನಂತರ ಹತ್ತಿಕೊಳ್ಳುವವರು ಬಂದು ಹತ್ತಿಕೊಳ್ಳುತ್ತಾರೆ. ನಾವು ಸಾಬ್ರು ಹೊಸಗಾಡಿ ತೆಗೆದುಕೊಳ್ಳುವುದಿಲ್ಲ. ಹಳೆ ಗಾಡಿಯನ್ನೇ ರೆಡಿ ಮಾಡಿಸಿಕೊಳ್ಳುತ್ತೇವೆ ಎಂದು ವ್ಯಂಗ್ಯವಾಡಿದರು.
ನಾನು ಕಾಂಗ್ರೆಸ್ ಪಕ್ಷವನ್ನು ಬಿಡುತ್ತಿದ್ದೇನೆ, ಬೇರೆ ಪಾರ್ಟಿಗೆ ಹೋಗುತ್ತಿದ್ದೇನೆ ಎಂಬ ಹೆದರಿಕೆ ನನಗಿಲ್ಲ. ನಾನು ಮನಸ್ಸು ಮಾಡಿದ್ದರೆ ಯಾವತ್ತೋ ಮುಸ್ಲಿಂ ಲೀಡರ್ ಆಗುತ್ತಿದ್ದೆ. ನನಗೆ ಈ ಬಗ್ಗೆ ಯಾವುದೇ ಆಸೆಗಳಿಲ್ಲ. ನಾನು ಮಹಿಮಾ ಪಟೀಲ್, ನಾಡಗೌಡರು ಎಲ್ಲರ ಜೊತೆ ಮಾತನಾಡಿದ್ದೇನೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






