

ತಮ್ಮ ರಾಜಕೀಯ ಚಟುವಟಿಕೆಗಳ ಕುರಿತು ಶುರುವಾಗಿದ್ದ ಊಹಾಪೋಹಗಳಿಗೆ ಜೆಡಿಎಸ್ ನಾಯಕ ಮಧು ಬಂಗಾರಪ್ಪ ಅವರು ತೆರೆ ಎಳೆದಿದ್ದು, ಶೀಘ್ರದಲ್ಲಿಯೇ ಕಾಂಗ್ರೆಸ್’ಗೆ ಸೇರ್ಪಡಗೊಳ್ಳುತ್ತೇನೆಂದು ಹೇಳಿದ್ದಾರೆ.

ಶಿವಮೊಗ್ಗ: ತಮ್ಮ ರಾಜಕೀಯ ಚಟುವಟಿಕೆಗಳ ಕುರಿತು ಶುರುವಾಗಿದ್ದ ಊಹಾಪೋಹಗಳಿಗೆ ಜೆಡಿಎಸ್ ನಾಯಕ ಮಧು ಬಂಗಾರಪ್ಪ ಅವರು ತೆರೆ ಎಳೆದಿದ್ದು, ಶೀಘ್ರದಲ್ಲಿಯೇ ಕಾಂಗ್ರೆಸ್’ಗೆ ಸೇರ್ಪಡಗೊಳ್ಳುತ್ತೇನೆಂದು ಹೇಳಿದ್ದಾರೆ.
ಮಧು ಬಂಗಾರಪ್ಪ ಅವರು ಕಾಂಗ್ರೆಸ್’ಗೆ ಸೇರ್ಪಡೆಗೊಳ್ಳಲಿದ್ದಾರೆಂಬ ಮಾತುಗಳು, ಸುದ್ದಿಗಳು ಹಲವು ತಿಂಗಳುಗಳಿಂದ ಹರಿದಾಡುತ್ತಿದ್ದವು.
2018ರ ಲೋಕಸಭಾ ಚುನಾವಣೆಯ ಉಪಚುನಾವಣೆ ನಡೆದಾಗಿನಿಂದಲೂ ಮಧು ಬಂಗಾರಪ್ಪ ಅವರು ಕಾಂಗ್ರೆಸ್’ಗೆ ಸೇರ್ಪಡೆಗೊಳ್ಳಲಿದ್ದಾರೆಂಬ ಮಾತುಗಳು ಕೇಳಿ ಬಂದಿದ್ದವು. ಚುನಾವಣೆ ವೇಳೆ ಕಾಂಗ್ರೆಸ್ ನಾಯಕರಾದ ಕಾಗೋಡು ತಿಮ್ಮಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಮಧು ಬಂಗಾರಪ್ಪ ಪರ ಪ್ರಚಾರ ನಡೆಸಿದ್ದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಕೂಡ ಮಧು ಬಂಗಾರಪ್ಪ ಅವರಿಗೆ ದೊಡ್ಡ ಮಟ್ಟದಲ್ಲಿಯೇ ಬೆಂಬಲ ನೀಡಿತ್ತು.
ಸಾಕಷ್ಟು ಬೆಂಬಲಗಳು ದೊರೆತಿದ್ದರೂ ಕೂಡ ಮಧು ಬಂಗಾರಪ್ಪ ಅವರು ಚುನಾವಣೆಯಲ್ಲಿ ಸೋಲು ಕಾಣವಂತಾಗಿತ್ತು. ಬಳಿಕ ಮಧು ಬಂಗಾರಪ್ಪ ಅವರು ಜೆಡಿಎಸ್ ನಿಂದ ಅಂತರ ಕಾಯ್ದುಕೊಳ್ಳಲು ಆರಂಭಿಸಿದ್ದರು. ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲೂ ಪಾಲ್ಗೊಳ್ಳುತ್ತಿರಲಿಲ್ಲ. ಈ ಎಲ್ಲಾ ಬೆಳವಣಿಗೆಗಳೂ ಊಹಾಪೋಹಗಳಿಗೆ ಮತ್ತಷ್ಟು ಇಂಬು ನೀಡಿತ್ತು.
ಕೆಲ ದಿನಗಳ ಹಿಂದಷ್ಟೇ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮಧು ಬಂಗಾರಪ್ಪ ಅವರು ಗೆಲುವು ಸಾಧಿಸಿದ್ದು, ಗೆಲುವಿನ ಬಳಿಕ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿದ್ದಾರೆ. (kpc)


