

ಬಹುನಿರೀಕ್ಷಿತ ಸಂಪುಟ ವಿಸ್ತರಣೆಗೆ ಕೊನೆಗೂ ಮೂಹೂರ್ತ ಫಿಕ್ಸ್ ಆಗಿದ್ದು, ಆಕಾಂಕ್ಷಿಗಳ ಆಸೆ ಮತ್ತಷ್ಟು ಗರಿಗೆದರಿದೆ.
ಉಮೇಶ ಕತ್ತಿಗೆ ಸಚಿವ ‘ಭಾಗ್ಯ’?: ಮಂಗಳವಾರ ಬೆಂಗಳೂರಿಗೆ ಆಗಮನ!
ಬಹುನಿರೀಕ್ಷೆ ಹುಟ್ಟಿಸಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಬರುವ 13 ಅಥವಾ 14 ನೇ ತಾರೀಖು ವಿಸ್ತರಣೆಯಾಗಲಿದೆ.

ಬೆಂಗಳೂರು: ಬಹುನಿರೀಕ್ಷೆ ಹುಟ್ಟಿಸಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಬರುವ 13 ಅಥವಾ 14 ನೇ ತಾರೀಖು ವಿಸ್ತರಣೆಯಾಗಲಿದೆ.
ತಮ್ಮ ಸಂಪುಟಕ್ಕೆ ಸಿಎಂ ಯಡಿಯೂರಪ್ಪ 7 ಶಾಸಕರನ್ನು ಸೇರಿಸಿಕೊಳ್ಳಲಿದ್ದಾರೆ ಎದು ಹೇಳಲಾಗಿದ್ದರೂ ಅವರ ಹೆಸರುಗಳನ್ನು ಬಹಿರಂಗ ಪಡಿಸಿಲ್ಲ. ಆದರೆ ಬೆಳಗಾವಿ ಶಾಸಕ ಉಮೇಶ್ ಕತ್ತಿ ಮಂಗಳವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಉಮೇಶ್ ಕತ್ತಿ ಸೇರಿದಂತೆ ನಾಲ್ಕು ಶಾಸಕರುಗಳ ಹೆಸರನ್ನು ಸಿಎಂ ಪೈನಲ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನು ಬಾಕಿಯಿರುವ ಎರಡು ಸ್ಥಾನಗಳಿಗಾಗಿ ಮುರುಗೇಶ್ ನಿರಾಣಿ ಸೇರಿದಂತೆ 15 ಮಂದಿ ಆಕಾಂಕ್ಷಿಗಳಿದ್ದಾರೆ ಎಂದು ತಿಳಿದು ಬಂದಿದೆ.
ಹುಕ್ಕೇರಿಯಿಂದ 8 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಉಮೇಶ್ ಕತ್ತಿ, ಈ ಹಿಂದೆ ಹಲವು ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದಾರೆ. ಸಂಪುಟಕ್ಕೆ ಯಾರ್ಯಾರು ಸೇರಲಿದ್ದಾರೆ ಎಂಬ ಬಗ್ಗೆ ನನಗೆ ಮಾಹಿತಿಯಿಲ್ಲ, ಆದರೆ ಮಂಗಳವಾರ ನಾನು ಬೆಂಗಳೂರಿಗೆ ತೆರಳುತ್ತಿದ್ದೇನೆ, ಪಟ್ಟಿಯಲ್ಲಿ ನನ್ನ ಹೆಸರಿದ್ದರೆ ಸಚಿವನಾಗಿ ಕೆಲಸ ಮಾಡುತ್ತೇನೆ, ಒಂದು ವೇಳೆ ಸಚಿವನಾಗದಿದ್ದರೇ ಶಾಸಕನಾಗಿಯೇ ಮುಂದುವರಿಯುತ್ತೇನೆ ಎಂದು ಉಮೇಶ್ ಕತ್ತಿ ಹೇಳಿದ್ದಾರೆ.
ಯಡಿಯೂರಪ್ಪ ಅವರ ಆಪ್ತರಾಗಿರುವ ಉಮೇಶ್ ಕತ್ತಿ. ಸಿಎಂ ಆಗಿ ಯಡಿಯೂರಪ್ಪ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ರಚನೆಯಾದಾಗ ಅವರನ್ನು ರಾಜ್ಯ ಸಂಪುಟದಲ್ಲಿ ಸೇರಿಸಿಕೊಳ್ಳಬೇಕಿತ್ತು, ಆದರೆ ಹೈಕಮಾಂಡ್ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಉಮೇಶ್ ಕತ್ತಿಗೆ ಅವಕಾಶ ಸಿಗಲಿಲ್ಲ.
ಇದರಿಂದ ಅಸಮಾಧಾನಗೊಂಡಿದ್ದ ಉಮೇಶ್ ಕತ್ತಿ ಹಲವು ಬಾರಿ ಪಕ್ಷ ಮತ್ತು ಸಿಎಂ ವಿರುದ್ಧ ಹರಿಹಾಯ್ದಿದ್ದರು. ಆದರೆ ಈ ಬಾರಿ ಉಮೇಶ್ ಕತ್ತಿ ಸಂಪುಟ ಸೇರುವುದು ಬಹುತೇಕ ಖಚಿತವಾಗಿದೆ, ಹೀಗಾಗಿ ಕತ್ತಿ ಬೆಂಗಳೂರಿಗೆ ಮಂಗಳವಾರ ಆಗಮಿಸುತ್ತಿದ್ದಾರೆ.
ಉಮೇಶ್ ಕತ್ತಿಗೆ ಸಚಿವ ಸ್ಥಾನ ನೀಡಿದರೇ ಬೆಳಗಾವಿ ಜಿಲ್ಲೆಯಿಂದ ಐವರು ಶಾಸಕರು ಸಚಿವರಾಗಿ ಕೆಲಸ ನಿರ್ವಹಿಸುವಂತಾಗುತ್ತದೆ, ಈಗಾಗಲೇ ರಮೇಶ್ ಜಾರಕಿಹೊಳಿ, ಲಕ್ಷ್ಮಣ ಸವದಿ, ಶ್ರೀಮಂತ ಪಾಟೀಲ್, ಹಾಗೂ ಶಶಿಕಲಾ ಜೊಲ್ಲೆ ಸಚಿವರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ಬೆಂಗಳೂರು: ಬಹುನಿರೀಕ್ಷಿತ ಸಂಪುಟ ವಿಸ್ತರಣೆಗೆ ಕೊನೆಗೂ ಮೂಹೂರ್ತ ಫಿಕ್ಸ್ ಆಗಿದ್ದು, ಆಕಾಂಕ್ಷಿಗಳ ಆಸೆ ಮತ್ತಷ್ಟು ಗರಿಗೆದರಿದೆ.
ನಾಳೆ ಸಂಜೆ ಅಂದರೆ ಬುಧವಾರ ಸಾಯಂಕಾಲ 4 ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಬುಧವಾರ ಸಂಜೆ 4 ಗಂಟೆಗೆ ಸಚಿವ ಸಂಪುಟ ವಿಸ್ತರಣೆ ಮಾಡಲು ನಿರ್ಧಾರ ಮಾಡಿದ್ದೇನೆ. ನೂತನ ಸಚಿವರಿಗೆ ಮಂಗಳವಾರ ಸಂಜೆ ಮಾಹಿತಿ ನೀಡಲಾಗುವುದು ಎಂದಿದ್ದಾರೆ. ಸಂಪುಟ ವಿಸ್ತರಣೆಯ ಬಗ್ಗೆ ಯಾವುದೇ ಗೊಂದಲ ಇಲ್ಲ, ಈ ಬಗ್ಗೆ ಇರುವ ಊಹಾಪೋಹಗಳು ಸತ್ಯಕ್ಕೆ ದೂರವಾಗಿದೆ ಎಂದು ಬಿಎಸ್‌ವೈ ಸ್ಪಷ್ಟಪಡಿಸಿದ್ದಾರೆ.
ಇನ್ನೂ ಖಾಲಿಯಿರುವ 7 ಸಚಿವ ಸ್ಥಾನಗಳ ಪೈಕಿ ಆರು ಸ್ಥಾನಗಳಿಗೆ ಶಾಸಕರ ಹೆಸರು ಫೈನಲ್ ಆಗಿದ್ದು ಉಳಿದ ಒಂದು ಸ್ಥಾನಕ್ಕಾಗಿ ಅರವಿಂದ ಲಿಂಬಾವಳಿ ಮತ್ತು ಸಿಪಿ ಯೋಗೇಶ್ವರ್ ಲಾಬಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಇದೇ ವೇಳೆ ಹಲವು ಸಚಿವರಿಗೆ ಕೊಕ್ ನೀಡಿ ಹೊಸಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. (kpc)
