ಇಂದಿನ ವಿಶೇಶ- ಗೋದಿನ, ಜಲ್ಲಿಕಟ್ಟು, ಶ್ರೀ ನಾಗಚೌಡೇಶ್ವರಿ ಬಿಡುಗಡೆ

ಪೊಂಗಲ್ ಸ್ಪೆಷಲ್: ಜಲ್ಲಿಕಟ್ಟು ಸ್ಪರ್ಧೆಗೆ ತಮಿಳುನಾಡಿನಲ್ಲಿ ಅದ್ದೂರಿ ಚಾಲನೆ

ಸಂಕ್ರಾಂತಿ ನಿಮಿತ್ತ ತಮಿಳುನಾಡಿನಲ್ಲಿ ನಡೆಸುವ ಸಾಂಪ್ರದಾಯಿಕ ಜಲ್ಲಿಕಟ್ಟು ಸ್ಪರ್ಧೆಗೆ ಅದ್ದೂರಿ ಚಾಲನೆ ನೀಡಲಾಗಿದೆ.

Jallikattu

ಸಿದ್ಧಾಪುರ,ಜ.14- ಇಲ್ಲಿಯ ಬೇಡ್ಕಣಿ ಕೋಟೆ ಆಂಜನೇಯ ದೇವ ಸ್ಥಾನ ಆವರಣದಲ್ಲಿ ಇಂದು ಸಂಜೆ ಏಳು ಗಂಟೆಗೆ ಶ್ರೀನಾಗಚೌಡೇಶ್ವರಿ ಮಹಾತ್ಮೆ ಎನ್ನುವ ಯಕ್ಷಗಾನ ಪ್ರಸಂಗದ ಪುಸ್ತಕ ಬಿಡುಗಡೆ ಮತ್ತು ಯಕ್ಷಗಾನ ಪ್ರದರ್ಶನ ನಡೆಯಲಿದೆ. ಖ್ಯಾತ ಯಕ್ಷಗಾನ ಭಾಗವತರೂ, ಅರ್ಥಧಾರಿಗಳೂ ಆಗಿರುವ ಹೆಮ್ಮನಬೈಲ್ ರಾಮಚಂದ್ರಭಾಗವತ್ ಈ ಯಕ್ಷಗಾನ ಪ್ರಸಂಗ ರಚಿಸಿದ್ದು ಮಾರುತಿ ಪ್ರಸಾದಿತ ಯಕ್ಷಗಾನ ಕಲಾ ಸಂಘ ಈ ಪ್ರಸಂಗವನ್ನು ಇಂದು ಪ್ರದರ್ಶಿಸಲಿದೆ. ಇದೇ ಸಭಾ ಕಾರ್ಯಕ್ರಮದಲ್ಲಿ ಮಕ್ಕಳ ಯಕ್ಷಗಾನ ಹೆಜ್ಜೆ ತರಬೇತಿ ಶಿಬಿರಕ್ಕೂ ಚಾಲನೆ ನಡೆಯಲಿದೆ. ಈ ಸಭಾ ಕಾರ್ಯಕ್ರಮವನ್ನು ಉದ್ಯಮಿ ಭೀಮಣ್ಣ ನಾಯ್ಕ ಉದ್ಘಾಟಿಸಲಿದ್ದಾರೆ. ಸಾಮಾಜಿಕ ಕಾರ್ಯಕರ್ತ ಉಪೇಂದ್ರ ಪೈ ಯಕ್ಷಗಾನ ಪ್ರಸಂಗ ಪುಸ್ತಕ ಬಿಡುಗಡೆ ಮಾಡಲಿದ್ದು ಕೋಟೆ ಆಂಜನೇಯ ದೇವಸ್ಥಾನದ ಅದ್ಯಕ್ಷ ವಿ.ಎನ್.ನಾಯ್ಕ ಅಧ್ಯಕ್ಷತೆಯ ಈ ಸಭಾ ಕಾರ್ಯಕ್ರಮದಲ್ಲಿ ಎಂ.ಕೆ.ಭಟ್, ನಿರ್ಮಲಾ ಹೆಗಡೆ, ಪತ್ರಕರ್ತ ಕನ್ನೆಶ್ ಕೋಲಶಿರ್ಸಿ,ವಿ.ಆರ್.ಗೌಡ ಅಜ್ಜೀಬಳ, ಬಸೀರ್ ಸಾಬ್ ಬೇಡ್ಕಣಿ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದ ಸಂಘಟಕರಾದ ರಾಮಚಂದ್ರ ನಾಯ್ಕ ಮತ್ತು ಲಕ್ಷ್ಮಣ ನಾಯ್ಕ ಸರ್ವರನ್ನೂ ಆಮಂತ್ರಿಸಿದ್ದಾರೆ.

ಕಬ್ಬಡ್ಡಿ-ಸನ್ಮಾನ-

ಸಿದ್ದಾಪುರ : ಭಾರತ ದೇಶದ ದೇಶಿಯ ಕ್ರೀಡೆಯಾದ ಕಬಡ್ಡಿಯನ್ನು ಇತ್ತೀಚಿನ ದಿನದಲ್ಲಿ ಯುವಕರು ಅತೀ ಹೆಚ್ಚಿನದಾಗಿ ಆಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಕಬ್ಬಡ್ಡಿ  ದೈಹಿಕವಾಗಿ ಮಾನಸಿಕವಾಗಿ ಆರೋಗ್ಯವನ್ನು ಪಡೆಯುವ ಕ್ರೀಡೆಯಾಗಿದೆ ಮ್ಯಾಟ್ ಕಬಡ್ಡಿ ಆಡುವ ಮೂಲಕ ಗ್ರಾಮೀಣ ಭಾಗದಲ್ಲಿ ಕಬಡ್ಡಿಯನ್ನು ಉಳಿಸುವಂತಹ ಬೆಳೆಸುವಂತಹ ಕೆಲಸವನ್ನು ಸಂಘಟನೆಗಳು ಮಾಡುತ್ತಿವೆ ಇಂತಹ ಕೆಲಸವನ್ನು ನಾವು ಪ್ರೋತ್ಸಾಹಿಸಬೇಕಾಗಿದೆ ಎಂದು ಈ ಆರ್ ನಾಯ್ಕ್ ಬನವಾಸಿ ಭಾನುವಾರ ಸಿದ್ದಾಪುರ ತಾಲೂಕಿನ ಸಂಪಖಂಡ ದಲ್ಲಿ ನಡೆದ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಮಾತನಾಡುತ್ತಾ ಹೇಳಿದರು
ಕಬಡ್ಡಿ ಪಂದ್ಯಾವಳಿ ಕಾರ್ಯಕ್ರಮ ಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾಕ್ಟರ್ ನಾಗೇಶ್ ನಾಯಕ್ ಕಾಗಲ್ ಅವರು ಮಾತನಾಡಿ ಭಾರತವು ಅತ್ಯಂತ ಹೆಚ್ಚು ಯುವ ಸಮೂಹವನ್ನು ಹೊಂದಿದೆ ಯುವಕರು ಸಂಘಟನೆಯನ್ನು ಮಾಡಿ ಬೆಳೆಯುತ್ತಿರುವುದು ನಿಜಕ್ಕೂ ಕೂಡ ಶ್ಲಾಘನೀಯ ಸಂಘಟನೆಗಳು ಬಲವಾದರೆ ಹೋರಾಟ ಹಾಗೂ ನಮ್ಮ ಅಗತ್ಯ ಬೇಡಿಕೆ ಪಡೆದುಕೊಳ್ಳುವಲ್ಲಿ ಸಾಧ್ಯವಾಗುತ್ತದೆ ಭಾರತ ದ ಯುವ ಸಮೂಹ ವಿಶ್ವಕ್ಕೆ ಮಾದರಿಯಾಗಿರುತ್ತದೆ ಯುವಕರು ಸಂಘಟನೆಗಳಲ್ಲಿ ಪಾಲ್ಗೊಂಡು ನಾಯಕತ್ವ ಸದೃಢವಾಗಿ ಬೆಳೆಯಬೇಕಾಗಿದೆ ಎಂದು ಅವರು ಹೇಳಿದರು
ವಿವಿಧ ಕ್ಷೇತ್ರದಲ್ಲಿ ಸಾಧನೆ ಯನ್ನು ಮಾಡಿದಂತಹ ಸಾಧಕರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತುನಂದನ್ ನಾಯ್ಕ್ ಹಾರ್ಸಿಕಟ್ಟಾ ಇವರ ಯಕ್ಷಗಾನ ಕ್ಷೇತ್ರದ ಸೇವೆಯನ್ನು ಸ್ಮರಿಸಿ ಸನ್ಮಾನಿಸಿ ಗೌರವಿಸಲಾಯಿತು ಮತ್ತು ಕನ್ನಡ ಮಾಧ್ಯಮದಲ್ಲಿ ಓದಿಕಳೆದ ವರ್ಷದ ಪಿಯುಸಿ ಯಲ್ಲಿ 90%ಅಂಕ ಪಡೆದ ಅಶ್ವಿನಿ ಎಸ್ ನಾಯ್ಕ್ ಸಂಪಖಂಡ ರಿಗೆ ಸನ್ಮಾನಿಸಿ ಗೌರವಿಸಿದರು
ನಾಗಚೌ ಡೇಶ್ವರಿ ಯುವ ಗೆಳೆಯರ ಬಳಗದ ದ್ವಿತೀಯ ವರ್ಷದ ಕಬಡ್ಡಿ ಪಂದ್ಯಾವಳಿಯಲ್ಲಿ ಶ್ರೀ ನಾಮದಾರಿ ಬ್ಲೂ ಬಾಯ್ಸ್ ಶಿರಸಿ ಪ್ರಥಮ ಸ್ಥಾನವನ್ನು ಪಡೆದರು, ಕಾತ್ಯಾಯಿನಿ ಕಬಡ್ಡಿ.ಅವರ್ಸಾ ಅಂಕೋಲಾ ದ್ವಿತೀಯ ಸ್ಥಾನ ಪಡೆದರು.

ಮಧುರೈ: ಸಂಕ್ರಾಂತಿ ನಿಮಿತ್ತ ತಮಿಳುನಾಡಿನಲ್ಲಿ ನಡೆಸುವ ಸಾಂಪ್ರದಾಯಿಕ ಜಲ್ಲಿಕಟ್ಟು ಸ್ಪರ್ಧೆಗೆ ಅದ್ದೂರಿ ಚಾಲನೆ ನೀಡಲಾಗಿದೆ.

ತಮಿಳುನಾಡಿನ ಮದುರೈ ಜಿಲ್ಲೆಯ ಅವನಿಯಪುರಂನಲ್ಲಿ ಸಾಂಪ್ರದಾಯಿಕ ಜಲ್ಲಿಕಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಸುಮಾರು 200 ಹೋರಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿವೆ.

https://imasdk.googleapis.com/js/core/bridge3.433.1_en.html#goog_913046601

ಕೋವಿಡ್ ಸಾಂಕ್ರಾಮಿಕ ಹಿನ್ನಲೆಯಲ್ಲಿ ಶೇ.50ರಷ್ಚು ಮಾತ್ರ ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದ್ದು, ಸ್ಪರ್ಧೆ ವೀಕ್ಷಣೆಗೆ ಕೋವಿಡ್ ನೆಗೆಟಿವ್ ವರದಿ ಪ್ರಮಾಣ ಪತ್ರವನ್ನು ಕಡ್ಡಾಯ ಮಾಡಲಾಗಿದೆ.

ಅಂತೆಯೇ ಸ್ಪರ್ಧೆಯಲ್ಲಿ 150ಸ್ಪರ್ಧಿಗಳು ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲಾಗಿದ್ದು, ಅವರಿಗೂ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯ ಮಾಡಲಾಗಿದೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *