

ಸಂಕ್ರಾಂತಿ ಮಾರನೇ ದಿನವೇ ಧಾರವಾಡ ಬಳಿ ಭೀಕರ ಅಪಘಾತ ಸಂಭವಿಸಿದ್ದು, ದಾವಣಗೆರೆಯ ಕೆಲವು ವೈದ್ಯಕೀಯ ವೃತ್ತಿಪರರ ಕುಟುಂಬಗಳು ತೀವ್ರ ಆಘಾತಕ್ಕೊಳಗಾಗಿವೆ.

ಧಾರವಾಡ: ಸಂಕ್ರಾಂತಿ ಮಾರನೇ ದಿನವೇ ಧಾರವಾಡ ಬಳಿ ಭೀಕರ ಅಪಘಾತ ಸಂಭವಿಸಿದ್ದು, ದಾವಣಗೆರೆಯ ಕೆಲವು ವೈದ್ಯಕೀಯ ವೃತ್ತಿಪರರ ಕುಟುಂಬಗಳು ತೀವ್ರ ಆಘಾತಕ್ಕೊಳಗಾಗಿವೆ.
ಇಂದು ಬೆಳಗ್ಗೆ ಟೆಂಪೋ ಟ್ರಾವೆಲರ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಟೆಂಪೋದಲ್ಲಿ 11 ಮಂದಿ ಮೃತಪಟ್ಟಿರುವ ಘಟನೆ ಧಾರವಾಡ ಹೊರವಲಯದ ಇಟ್ಟಿಗಟ್ಟಿ ಬಳಿ ನಡೆದಿದೆ.
ಮೃತರೆಲ್ಲರೂ ದಾವಣಗೆರೆ ಮೂಲದವರಾಗಿದ್ದು, ಬಹುತೇಕರು ವೈದ್ಯಕೀಯ ವೃತ್ತಿಯಲ್ಲಿದ್ದರು ಮತ್ತು ಇವರೆಲ್ಲರೂ ಶಾಲಾ ಸ್ನೇಹಿತರಾಗಿದ್ದು, ದಾವಣಗೆರೆಯಿಂದ ಗೋವಾಕ್ಕೆ ಪ್ರವಾಸ ಹೊರಟ್ಟಿದ್ದರು.
ಮೃತ 10 ಮಹಿಳೆಯರ ಪೈಕಿ ನಾಲ್ವರು ವೈದ್ಯರಾಗಿದ್ದರೆ, ಇತರರು ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದರು. ಮೃತರು ಶಾಲಾ ಸ್ನೇಹಿತರಾಗಿದ್ದು, ಗೋವಾಕ್ಕೆ ಒಂದು ದಿನದ ಟ್ರಿಪ್ ಹೊರಟ್ಟಿದ್ದರು.
“ನಾವು ಧಾರವಾಡದ ಬೃಂದಾವನ್ ಹೋಟೆಲ್‌ನಲ್ಲಿ ಗೋವಾಗೆ ತೆರಳುತ್ತಿದ್ದ ತಂಡದ ಸದಸ್ಯರಿಗೆ ಉಪಾಹಾರ ವ್ಯವಸ್ಥೆ ಮಾಡಿದ್ದೆವು. ಆದರೆ ಹೆದ್ದಾರಿಯಲ್ಲಿ ಅಪಘಾತವಾಗಿದ್ದು ತಿಳಿದು ನಾವು ಆಘಾತಕ್ಕೊಳಗಾಗಿದ್ದೇವೆ. ಮೃತರು ಶಾಲಾ ಸಮಯದಿಂದಲೂ ಉತ್ತಮ ಸ್ನೇಹಿತರಾಗಿದ್ದರು ಮತ್ತು ನಮ್ಮನ್ನು ಭೇಟಿಯಾಗಲು ಉತ್ಸುಕರಾಗಿದ್ದರು” ಎಂದು ಧಾರವಾಡದ ಕುಟುಂಬದ ಸ್ನೇಹಿತರೊಬ್ಬರು ಹೇಳಿದ್ದಾರೆ.
ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಪಣಜಿಗೆ ತೆರಳುತ್ತಿದ್ದು, ಲಾರಿ ಬೆಳಗಾವಿಯಿಂದ ಬರುತ್ತಿದ್ದಾಗ ಈ ವೇಳೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಟೆಂಪೋ ಟ್ರಾವೆಲರ್ನಲ್ಲಿದ್ದ ಕನಷ್ಠ 11 ಮಂದಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಎಸ್ಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ಘಟನೆಗೆ ಸಂಬಂಧಿಸಿದಂತೆ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (kpc)
